ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶೀಘ್ರ ಪೂಜೆ ಆರಂಭ

28/05/2020

ಮಡಿಕೇರಿ ಮೇ 28 : ನಗರದ ಸಮೀಪದ ಕರ್ಣಂಗೇರಿಯಲ್ಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ನಿತ್ಯ ಪೂಜೆ ಜೂನ್ ತಿಂಗಳ ನಂತರ ಆರಂಭಗೊಳ್ಳಲಿದೆ ಎಂದು ದೇವಾಲಯದ ಟ್ರಸ್ಟಿ ಗೋವಿಂದಸ್ವಾಮಿ ತಿಳಿಸಿದ್ದಾರೆ.
ಕೊರೋನಾ ಲಾಕ್ ಡೌನ್ ನಿಂದ ಕಳೆದ ಎರಡು ತಿಂಗಳುಗಳಿಂದ ಮುಚ್ಚಲ್ಪಟ್ಟಿದ್ದ ದೇವಾಲಯವನ್ನು ಸರ್ಕಾರದ ಅಧಿಕೃತ ಆದೇಶ ಬಂದ ತಕ್ಷಣ ತೆರೆದು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದೆಂದು ಹೇಳಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.