ತಲಕಾವೇರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರ ಒತ್ತಾಯ

28/05/2020

ಮಡಿಕೇರಿ ಮೇ 28 : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ಅನೇಕ ಕುಟುಂಬಗಳು ವಾಸಿಸುತ್ತಿದ್ದು, ಸಂಚಾರಕ್ಕೆ ದುಬಾರಿ ದರ ನೀಡಿ ಆಟೋರಿಕ್ಷಾ ಅಥವಾ ಜೀಪ್ ಗಳನ್ನೇ ಅವಲಂಬಿಸಬೇಕಾಗಿದೆ. ಲಾಕ್ ಡೌನ್ ನಿಂದಾಗಿ ಗ್ರಾಮಸ್ಥರು ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದು, ಕನಿಷ್ಠ ಬೆಳಗ್ಗೆ ಮತ್ತು ಸಂಜೆ ಸರ್ಕಾರಿ ಬಸ್ ವ್ಯವಸ್ಥೆಯನ್ನಾದರು ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.