ಕೊನೆಗೂ ಪೂರ್ಣಗೊಂಡ ಮುತ್ತಣ್ಣ ಸರ್ಕಲ್ ಕಾಂಕ್ರಿಟ್ ರಸ್ತೆ ಕಾಮಗಾರಿ

28/05/2020

ಮಡಿಕೇರಿ ಮೇ 28 : ಕಳೆದ ಹಲವು ತಿಂಗಳುಗಳಿಂದ ಕುಂಟುತ್ತಾ ಸಾಗುತ್ತಿದ್ದ ಜಿಲ್ಲಾಡಳಿತದ ಕೇಂದ್ರ ಸ್ಥಾನ ಮಡಿಕೇರಿ ನಗರದ ಮಂಗೇರಿರ ಮುತ್ತಣ್ಣ ವೃತ್ತದ ಕಾಂಕ್ರಿಟ್ ರಸ್ತೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಸುಮಾರು ಐದು ತಿಂಗಳ ಹಿಂದೆ ಆರಂಭವಾದ ಕಾಮಗಾರಿ ಹಲವು ಕಾರಣಗಳಿಂದ ಆಮೆಗತಿಯಲ್ಲಿ ಸಾಗಿತ್ತು. ಅಲ್ಲದೆ ಇತ್ತೀಚೆಗೆ ಲಾಕ್ ಡೌನ್ ಪರಿಣಾಮದಿಂದ ಕಾಮಗಾರಿಯೇ ಸ್ಥಗಿತಗೊಂಡಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಸೀಮಿತ ಕಾರ್ಮಿಕರು ಕಾಮಗಾರಿಯನ್ನು ಪೂರ್ಣಗೊಳಿಸಿದ್ದಾರೆ.