ಪರಿಹಾರ ಬಿಡುಗಡೆಗೆ ಟೈಲರ್ಸ್ ಅಸೋಸಿಯೇಷನ್ ಒತ್ತಾಯ

29/05/2020

ಮಡಿಕೇರಿ ಮೇ 28 : ಕೊರೋನಾ ಲಾಕ್‍ಡೌನ್‍ನಿಂದಾಗಿ ಸಮಸ್ಯೆ ಎದುರಿಸುತ್ತಿರುವ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‍ನಲ್ಲಿ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೂ ಪರಿಹಾರ ವಿತರಿಸಬೇಕೆಂದು ಟೈಲರ್ಸ್ ಅಸೋಸಿಯೇಷನ್ ನ ಕೊಡ್ಲಿಪೇಟೆ ಘಟಕದ ಅಧ್ಯಕ್ಷ ಬಿ.ಡಿ.ಧರ್ಮಣ್ಣ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲಾಕ್‍ಡೌನ್ ನಿಂದಾಗಿ ಎಲ್ಲಾ ಅಸಂಘಟಿತ ಕಾರ್ಮಿಕ ವಲಯ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಟೈಲರ್ಸ್ ಕೂಡ ಇದರಿಂದ ಹೊರತಾಗಿಲ್ಲ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಹೊಲಿಗೆ ವೃತ್ತಿ ನಿರತರನ್ನೇ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.
ಟೈಲರ್ ಗಳ ಸಂಕಷ್ಟದ ಬದುಕಿನ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘದ ವತಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಧರ್ಮಣ್ಣ ಎಚ್ಚರಿಕೆ ನೀಡಿದ್ದಾರೆ.