ಎಲ್ಲಾ ರೈತರಿಗೆ ರೂ.5 ಸಾವಿರ ಪರಿಹಾರ

29/05/2020

ಬೆಂಗಳೂರು ಮೇ 28 : ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂ. ಪರಿಹಾರ ನೀಡಲು ಮುಂದಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ ಅವರು, ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಎಲ್ಲಾ ವರ್ಗಕ್ಕೂ ಪರಿಹಾರ ನೀಡಲಾಗುವುದು ಎಂದರು.
ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ ಐದು ಸಾವಿರ ರೂಪಾಯಿ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು.
ರಾಜ್ಯ ಸರ್ಕಾರ ರೈತರು, ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗಾಗಿ 2,173 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಇದರಡಿ ಹಿಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಪ್ರತಿ ರೈತರಿಗ ಐದು ಸಾವಿರ ರೂಪಾಯಿ ಪರಿಹಾರ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಮುಂಗಾರು ಅವಧಿಯಲ್ಲಿ ಮೆಕ್ಕೆ ಜೋಳ ಬೆಳೆದ ರೈತರಿಗೂ ಪರಿಹಾರ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.