ಮೇ 30 ರಂದು ಆಹಾರ ಸಚಿವರ ಕೊಡಗು ಜಿಲ್ಲಾ ಪ್ರವಾಸ

29/05/2020

ಮಡಿಕೇರಿ ಮೇ.29 : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಗೋಪಾಲಯ್ಯ ಅವರು ಮೇ 30 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮೇ 30 ರಂದು ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ ಹಾಗೂ ಪಡಿತರ ಚೀಟಿ ಹೊಂದಿಲ್ಲದ ವಲಸೆ ಕಾರ್ಮಿಕರಿಗೆ ಪಡಿತರ ವಿತರಣೆ ಬಗ್ಗೆ ಪ್ರಗತಿ ಪರಿಶೀಲನೆಯನ್ನು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಿದ್ದಾರೆ.
ಬಳಿಕ ಮಧ್ಯಾಹ್ನ 1.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಆಹಾರ ಇಲಾಖೆಗೆ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜು ಅವರು ತಿಳಿಸಿದ್ದಾರೆ.