ಜೂ. 4 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ : ಸಂತ್ರಸ್ತರಿಗೆ ಮನೆಗಳ ಹಸ್ತಾಂತರ

May 29, 2020

ಮಡಿಕೇರಿ ಮೇ.29 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜೂನ್, 4 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜೂನ್, 04 ರಂದು ಬೆಳಗ್ಗೆ 11 ಗಂಟೆಗೆ ಜಂಬೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ಮದೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.

 

 

 

 

error: Content is protected !!