ಸೋಮವಾಪೇಟೆ, ಕುಶಾಲನಗರ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

29/05/2020

ಮಡಿಕೇರಿ ಮೇ 29 :  ಸೋಮವಾಪೇಟೆ, ಕುಶಾಲನಗರ ರಾಜ್ಯ ಹೆದ್ದಾರಿಯಲ್ಲಿ  ಬೆಳ್ಳಂಬೆಳಗ್ಗೆ ಸುಮಾರು 10 ಆನೆಗಳು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಬೇಳೂರು ಸಮೀಪ ಕಾಟ್ನಮನೆ ಗ್ರಾಮಕ್ಕೆ ತೆರಳುವ ರಸ್ತೆ ಸಮೀಪ ರಾಜಾರೋಷವಾಗಿ ಕಾಡಾನೆಗಳ ಹಿಂಡು ಹೆದ್ದಾರಿ ದಾಟುತ್ತಿದ್ದು,  ರಸ್ತೆಯಲ್ಲಿ ನಡೆದು ಕೊಂಡು ಬರುತ್ತಿದ್ದ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ  ಪರಿಶೀಲನೆ ನಡೆಸಿದ್ದು, ಆನೆ ಹಾವಳಿಯಿಂದ ಕಂಗಾಲಾಗಿರುವ ಗ್ರಾಮಸ್ಥರು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.