ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ 59 ಮಂದಿ ದಾಖಲು

29/05/2020

ಮಡಿಕೇರಿ ಮೇ 29 : ಮೂವರು ಸೋಂಕಿತರನ್ನು ಕಂಡ ಕೊಡಗಿನಲ್ಲಿ ಕೋವಿಡ್ 19 ವ್ಯಾಪಿಸದಂತೆ ತಡೆಯಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, 59 ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇತರೆ ದೇಶದ 17 ಮತ್ತು ಇತರೆ ರಾಜ್ಯದ 139 ಮಂದಿ ಸೇರಿ ಒಟ್ಟು 156 ಮಂದಿಯನ್ನು ಗೃಹ ಸಂಪರ್ಕ ತಡೆಯಲ್ಲಿಡಲಾಗಿದೆ.
ಇಲ್ಲಿಯವರೆಗೆ ಒಟ್ಟು 2532 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಮೂವರ ವರದಿ ಪಾಸಿಟಿವ್ ಬಂದಿದ್ದು, ಒಬ್ಬರು ಗುಣಮುಖರಾಗಿದ್ದಾರೆ. ಇಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
2384 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, 145 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 59 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.