ಜೂ. 7 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ : ಕೊಡಗು ಜಿಲ್ಲಾ ಕಾಂಗ್ರೆಸ್‍ನಿಂದ ಪೂರ್ವಭಾವಿ ಸಭೆ

ಮಡಿಕೇರಿ ಮೇ 30 : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭದ ಪೂರ್ವ ಭಾವಿ ಸಭೆಯನ್ನು ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು.
ಈ ಸಂದರ್ಭ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆ.ಪಿ.ಸಿ.ಸಿ) ಕಾರ್ಯಾಧ್ಯಕ್ಷ ಸಲೀಂ ಅಹಮದ್, ಜೂ. 7 ರಂದು ನಡೆಯುವ ಪದಗ್ರಹಣ ಕಾರ್ಯಕ್ರಮವನ್ನು ಪ್ರತಿ ಪಂಚಾಯ್ತಿ ಮಟ್ಟದಿಂದ ಕೆಪಿಸಿಸಿ ಸೂಚಿಸಿರುವ ಮಾರ್ಗದರ್ಶನದಲ್ಲಿ ಯಶಸ್ವಿ ಪೂರ್ಣವಾಗಿ ನಡೆಸುವಂತೆ ಸೂಚಿಸಿದರು.
ಕೆಪಿಸಿಸಿ ಜಿಲ್ಲಾ ವೀಕ್ಷಕರು ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುಳಾ ರಾಜ್ ಮಾತನಾಡಿ, ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು, ತಳ ಮಟ್ಟದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷ ಬಲವರ್ಧನೆಗೊಳಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕಾರ್ಯಕ್ರಮದ ಕುರಿತು ಇಲ್ಲಿಯವರೆಗೆ ನಡೆಸಲಾದ ಮಾಹಿತಿಯನ್ನು ಸಭೆಗೆ ತಿಳಿಸಿದರು.
ಅಲ್ಲದೇ ಜಿಲ್ಲೆಯಲ್ಲಿ ಸಹಕಾರ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಅನೇಕರು ಜಯಗಳಿಸಿದ್ದು, ಹಿಂದಿನ ಚುನಾವಣೆಯ ಫಲಿತಾಂಶಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗಳಿಸಿರುವುದಾಗಿ ತಿಳಿಸಿದರು.
ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರು ಚುನಾಯಿತ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಮುಂಚುಣಿ ಘಟಕದ ಅಧ್ಯಕ್ಷರು ಈ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿ ಪೂರಕವಾಗಿ ನಡೆಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಕೊಡಗು ಜಿಲ್ಲಾ ಕೊವೀಡ್ 19 ಟಾಸ್ಕ್‍ಪೋರ್ಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನಾ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಕೆಪಿಸಿಸಿ ಉಸ್ತುವಾರಿ ವೆಂಕಪ್ಪ ಗೌಡ, ಟಿ.ಎಂ. ಶಾಹಿದ್, ಕೆಪಿಸಿಸಿ ಮುಖಂಡರಾದ ಕೆ.ಪಿ. ಚಂದ್ರಕಲಾ, ಮಿಟ್ಟು ಚಂಗಪ್ಪ, ಕೆ.ಎಂ. ಇಬ್ರಾಹಿಂ, ಟಿ.ಪಿ. ರಮೇಶ್, ಅರಣ್ ಮಾಚಯ್ಯ, ಚಂದ್ರಮೌಳಿ, ಮಾಜಿ ಜಿಲ್ಲಾಧ್ಯಕ್ಷ ಶಿವುಮಾದಪ್ಪ, ಪದಗ್ರಹಣ ಕಾರ್ಯಕ್ರಮದ ಕೆಪಿಸಿಸಿ ವೀಕ್ಷಕರಾದ ಎಡ್ಮಿನ್ ವಿಚಾರ್ಡ್, ಬಿಜಿ ಜಾನ್, ಪ್ರದೀಪ್ ರೈ, ಪಿ. ರಾಜು, ವಕ್ಫ್ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಎ. ಯಾಕುಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಿ.ಬಿ. ಸತೀಶ್, ಅಪ್ರು ರವೀಂದ್ರ, ನವೀನ್ ಮಿದೇರಿರ, ರಂಜಿ ಪೂಣಚ್ಚ, ಕೆ.ಯು. ಇಸ್ಮಾಯಿಲ್, ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷರಾದ ತಾರ ಅಯ್ಯಮ್ಮ, ಕೆಪಿಸಿಸಿ ಕಾರ್ಮಿಕ ಘಟಕದ ಕಾಯದರ್ಶಿ ಅಜ್ಜಳ್ಳಿ ರವಿ, ಕೆಪಿಸಿಸಿ ಕಿಸಾನ್ ಘಟಕದ ಕಾರ್ಯಾಕಾರಿ ಸಮಿತಿ ಸದಸ್ಯ ಗೋಪಾಲ ಕೃಷ್ಣ ಹಾಗೂ ವಿವಿಧ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬ್ರಿಗೆಡ್‍ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳು, ವಲಯ ಅಧ್ಯಕ್ಷರು, ನಗರ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.
ಜಿಲ್ಲಾ ಕಿಸನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ಸ್ವಾಗತಿಸಿದರು.
ಜಿಲ್ಲಾ ವಕ್ತಾರರಾದ ಮುನಿರ್ ಅಹಮ್ಮದ್ ನಿರೂಪಿಸಿ, ವಂದಿಸಿದರು. ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನು ಸಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು ವಹಿಸಿದ್ದರು.