ದೇವನೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿ

30/05/2020

ಮಡಿಕೇರಿ ಮೇ 30 : ಕಳೆದ ವಾರ ಹುಲಿಯೊಂದನ್ನು ಸೆರೆ ಹಿಡಿಯಲಾಗಿದ್ದರೂ ದಕ್ಷಿಣ ‌ಕೊಡಗಿನಲ್ಲಿ ವ್ಯಾಘ್ರನ ದಾಳಿ ಮುಂದುವರೆದಿದೆ. ದೇವನೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮಾಲೀಕರಾದ ಕವಿತಾ ಪ್ರಕಾಶ್ ಅವರಿಗೆ ಪರಿಹಾರದ ಭರವಸೆ ನೀಡಿದ್ದಾರೆ.
ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ತಕ್ಷಣ ವನ್ಯಜೀವಿ ಉಪಟಳಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.