ಚೆಂಬು ಗ್ರಾಮದ ನವವಿವಾಹಿತನ ಶವ ಪರೀಕ್ಷೆ ನಡೆಸಿದ್ದು ಯಾಕೆ ಗೊತ್ತಾ !

30/05/2020

ಮಡಿಕೇರಿ ಮೇ 30 : ನವವಿವಾಹಿತನೊಬ್ಬ ಜ್ವರದಿಂದ ಮೃತಪಟ್ಟಿದ್ದು, ಗ್ರಾಮಸ್ಥರ ಮನವಿಗೆ ಮಣಿದು ಮರಣೋತ್ತರ ಪರೀಕ್ಷೆ ನಡೆಸಿದ ಪ್ರಕರಣ ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾನೆ. ಇದರಿಂದ ಗ್ರಾಮಸ್ಥರು ಆತಂಕಗೊಂಡು ಆರೋಗ್ಯ ಇಲಾಖೆಯ ಗಮನ ಸೆಳೆದಾಗ ಶವವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಅಲ್ಲದೆ ಜಿಲ್ಲಾ ಆರೋಗ್ಯ ಇಲಾಖೆ ವೈದ್ಯರನ್ನು ಚೆಂಬು ಗ್ರಾಮದ ನಿವಾಸಕ್ಕೆ ಕಳುಹಿಸಿ ಮಾಹಿತಿ ಕಲೆ ಹಾಕಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯ ಇಲಾಖೆ ಆತಂಕ ಪಡುವ ಯಾವುದೇ ಅಂಶಗಳು ಕಂಡು ಬಂದಿಲ್ಲವೆಂದು ಸ್ಪಷ್ಟಪಡಿಸಿದೆ. ವ್ಯಕ್ತಿ ಇದೇ ಮೇ 24 ರಂದು ವಿವಾಹವಾಗಿದ್ದರು.