ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಕಾರು : ಸೋಮವಾರಪೇಟೆಯಲ್ಲಿ ಘಟನೆ

31/05/2020

ಮಡಿಕೇರಿ ಮೇ 31 : ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ಸೋಮವಾರಪೇಟೆ ಸಮೀಪದ ಬಳಗುಂದದಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ಎದುರಿನಿಂದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಮಹಿಂದ್ರ ಝೈಲೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಅದೃಷ್ಟವಶಾತ್ ಚಾಲಕ ಸೇರಿದಂತೆ ಮೂವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.