ಗಾಳಿ, ಮಳೆ ಮುನ್ಸೂಚನೆ : ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

31/05/2020

ಮಡಿಕೇರಿ ಮೇ 31 : ಪೂರ್ವ ಮಧ್ಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕೊಡಗು ಜಿಲ್ಲೆಯಲ್ಲೂ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜೂ.1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿರುವ ಅವರು ಅನಾಹುತಗಳು ಎದುರಾಗುವ ಮುನ್ಸೂಚನೆಗಳು ಕಂಡು ಬಂದಲ್ಲಿ ದೂ.ಸಂ 08272 221077 ಕ್ಕೆ ಕರೆ ಮಾಡುವಂತೆ ಹೇಳಿದ್ದಾರೆ.