10 ನೇ ತರಗತಿ ಪರೀಕ್ಷೆ ಬರೆಯುವ ಕೊಡಗಿನ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ !

May 31, 2020

ಮಡಿಕೇರಿ ಮೇ 31 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಡಿಕೇರಿ ಮತ್ತು ವಿರಾಜಪೇಟೆ ತಲಾ 8 ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 11 ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಾಧಿಕಾರಿ ಮಚ್ಚಾಡೋ ತಿಳಿಸಿದ್ದಾರೆ. 7,149 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3,562 ಬಾಲಕರು ಮತ್ತು 3,587 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಒಂದು ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.