ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ
01/06/2020

ತುಮಕೂರು ಮೇ 31 : ಕೊರೊನಾ ಸಂಕಷ್ಟದ ನಡುವೆಯು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಓಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕುಡಿಯಲು ಮನೆಯಿಂದಲೇ ಬಿಸಿ ನೀರನ್ನು ತರುವಂತೆ ಸೂಚಿಸಬೇಕು. ಜೊತೆಗೆ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರಲ್ಲದೇ ಕೇಂದ್ರಗಳಲ್ಲಿ ಶೌಚಾಲಯದ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.