ಗಂಧ ಸಿಗುತ್ತೆ, ತೀರ್ಥ ಸಿಗಲ್ಲ

01/06/2020

ಉಡುಪಿ ಮೇ 31 : ಜೂನ್ ಎಂಟರಿಂದ ಮುಜರಾಯಿ ದೇವಸ್ಥಾನಗಳು ತೆರೆದುಕೊಳ್ಳುತ್ತವೆ. ದೇವಸ್ಥಾನದಲ್ಲಿ ಕುಂಕುಮ, ಗಂಧ ಕೊಡ್ತೇವೆ ಆದ್ರೆ ತೀರ್ಥ ಕೊಡುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ಅಧೀನ ದೇವಸ್ಥಾನಗಳು ನಾಳೆಯಿಂದ ತೆರೆಯುವುದಿಲ್ಲ. ಈ ಹಿಂದೆ ಜೂನ್ 1ರಿಂದ ಎಲ್ಲ ದೇವಸ್ಥಾನಗಳನ್ನು ತೆರೆಯಲಿವೆ ಎಂದು ಹೇಳಲಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರದಿಂದ ಸಹಮತ ನಿರೀಕ್ಷೆ ಮಾಡಲಾಗಿತ್ತು. ಕೇಂದ್ರ ಸರ್ಕಾರ ಜೂನ್ 8ರಿಂದ ತೆರೆಯಲು ಅನುಮತಿಸಿದೆ. ನಾವು ಕೇಂದ್ರದ ಆದೇಶವನ್ನು ಪಾಲಿಸುತ್ತೇವೆ ಎಂದರು.