ಹುಲಿ ಪ್ರದೇಶದ ಕಟ್ಟಡ ತೆರವು

01/06/2020

ಚಾಮರಾಜನಗರ ಮೇ 31 : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು, ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವವರಿಗೆ ಕಟ್ಟಡ ತೆರವುಗೊಳಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರವಾಸೋದ್ಯಮ ಇಲಾಖೆಯವರು ಅನುಮತಿಸಿರುವ ಯಾವುದೇ ಅನ್ಯಕ್ರಾಂತವಾಗದೇ ನಿರ್ಮಿಸಿರುವ 3 ಹೋಂ ಸ್ಟೇ ಕಟ್ಟಡಗಳಿಗೆ ನೀಡಿರುವ ಅನುಮತಿಯನ್ನು ಹಿಂಪಡೆಯುವ ಆದೇಶಕ್ಕೆ ಜಿಲ್ಲಾಧಿಕಾರಿಯವರು ಕ್ರಮ ತೆಗೆದುಕೊಂಡಿದ್ದಾರೆ. ಅನುಮತಿ ಪಡೆಯದ ಇನ್ನೊಂದು ಹೋಂ ಸ್ಟೇ ನಡೆಸದಂತೆ ಬೀಗಮುದ್ರೆ ಹಾಕಲಾಗಿತ್ತು. ಆದರೂ ಸಹ ಬೀಗಮುದ್ರೆ ಆದೇಶ ಉಲ್ಲಂಘಿಸಿ ಹೋಂ ಸ್ಟೇ ತೆರೆದು ಕಟ್ಟಡ ದುರಸ್ತಿ ಕಾರ್ಯ ಕೈಗೊಂಡಿದ್ದ ಸದರಿ ಮಾಲೀಕರ ವಿರುದ್ಧ ಕ್ರಮಿನಲ್ ಮೊಕದ್ದಮೆ ಹೂಡಲು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.