ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂ.2 ರಂದು ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ

01/06/2020

ಮಡಿಕೇರಿ ಜೂ.1 : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂ.2 ರಂದು ಮಧ್ಯಾಹ್ನ 12 ಗಂಟೆಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ. ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಸಂಕೀರ್ಣದ ಎದುರು ಸೀಮಿತ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಲಾಗುವುದೆಂದು ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.