ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕಲೀಲ್ ಭಾಷ ಆಯ್ಕೆ

01/06/2020

ಮಡಿಕೇರಿ ಜೂ.1 : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ನಗರದ ಮಹದೇವಪೇಟೆ ನಿವಾಸಿ ಕಲೀಲ್ ಭಾಷಾ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ.