ಜೂ. 4 ರಂದು ಕಂದಾಯ ಸಚಿವರ ಕೊಡಗು ಜಿಲ್ಲಾ ಪ್ರವಾಸ

01/06/2020

ಮಡಿಕೇರಿ ಜೂ.01 : ಕಂದಾಯ ಸಚಿವರಾದ ಆರ್.ಅಶೋಕ್ ಅವರು ಜೂನ್, 4 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜೂನ್, 04 ರಂದು ಬೆಳಗ್ಗೆ 11 ಗಂಟೆಗೆ ಜಂಬೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ಮದೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್ ಅವರು ತಿಳಿಸಿದ್ದಾರೆ.