ಹರಪಳ್ಳಿ ಗ್ರಾಮ ಸಂಪರ್ಕ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ

02/06/2020

ಸೋಮವಾರಪೇಟೆ 2 : ರೂ. 90 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೈಗೊಳ್ಳಲು ಉದ್ದೇಶಿಸಲಾಗಿರುವ ಹರಪಳ್ಳಿ ಗ್ರಾಮ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ವಿಶೇಷ ಪ್ಯಾಕೇಜ್‍ನಲ್ಲಿ ರೂ. 90 ಲಕ್ಷ ಹಣವನ್ನು ಹರಪಳ್ಳಿ ಗ್ರಾಮ ಸಂಪರ್ಕ ರಸ್ತೆಗೆ ಮೀಸಲಿಟ್ಟಿದ್ದು, 1.38 ಕಿ.ಮೀ. ಕಾಂಕ್ರೀಟ್ ರಸ್ತೆ, ಅವಶ್ಯವಿರುವ ಕಡೆಗಳಲ್ಲಿ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು.
ಕಾಮಗಾರಿ ನಡೆಯುವ ಸಂದರ್ಭ ಸ್ಥಳೀಯರು ಗುಣಮಟ್ಟದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಕ್ರಿಯಾಯೋಜನೆಯಂತೆ ಕೆಲಸ ಆಗುವಂತೆ ನೋಡಿಕೊಳ್ಳಬೇಕು. ರಸ್ತೆಗಳ ಬಾಳಿಕೆಗೆ ಚರಂಡಿಗಳು ಅಗತ್ಯವಾಗಿದ್ದು, ಚರಂಡಿ ನಿರ್ಮಾಣಕ್ಕೆ ಅವಶ್ಯವಿರುವ ಜಾಗವನ್ನು ಗ್ರಾಮಸ್ಥರು ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯ ಧರ್ಮಪ್ಪ, ಗ್ರಾ.ಪಂ. ಅಧ್ಯಕ್ಷೆ ವಿ.ಜೆ. ಭಾರತಿ, ಗ್ರಾಮಾಧ್ಯಕ್ಷ ಹೆಚ್.ಕೆ. ಗುರಪ್ಪ, ಪಿಡಿಓ ಮಂಜುಳಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‍ಕುಮಾರ್, ಅಭಿಯಂತರ ರಮಣಗೌಡ, ಪ್ರಮುಖರಾದ ಜಲಾ ಹೂವಯ್ಯ, ಸುಧಾಕರ್, ಜೋಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.