ಸೋಮವಾರಪೇಟೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ

02/06/2020

ಸೋಮವಾರಪೇಟೆ ಜೂ. 2 : ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಜಿಲ್ಲಾಡಳಿತದಿಂದ ಸಮಾಜ ಕಲ್ಯಾಣ ಇಲಾಖೆ ಮೂಲಕ ಅಗತ್ಯ ಆಹಾರ ಸಾಮಾಗ್ರಿಯ ಕಿಟ್‍ಗಳನ್ನು ವಿತರಿಸಲಾಯಿತು.
ಶಾಸಕ ಅಪ್ಪಚ್ಚು ರಂಜನ್ ಅವರು ತಮ್ಮ ಕಚೇರಿ ಆವರಣದಲ್ಲಿ 80 ಮಂದಿ ಫಲಾನುಭವಿಗಳಿಗೆ ಕಿಟ್ ವಿತರಿಸಿದರು.
ಈ ಸಂದರ್ಭ ತಹಸೀಲ್ದಾರ್ ಗೋವಿಂದರಾಜು, ತಾ.ಪಂ. ಸದಸ್ಯೆ ಹೆಚ್.ಎನ್. ತಂಗಮ್ಮ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಶೇಖರ್, ಸಿಬ್ಬಂದಿ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.