ಸೋಮವಾರಪೇಟೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ

02/06/2020

ಮಡಿಕೇರಿ ಜೂ. 2 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ಪ.ಪಂ.ನ ಎಸ್‍ಎಫ್‍ಸಿ ಶೇ.24.10 ಅನುದಾನದಡಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ರಂಜನ್, ಅಂಗನವಾಡಿಗೆ ಆಗಮಿಸುವ ಮಕ್ಕಳಿಗೆ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭ ಪ.ಪಂ. ಸದಸ್ಯರುಗಳಾದ ಬಿ.ಆರ್. ಮಹೇಶ್, ಶೀಲಾ ಡಿಸೋಜ, ನಳಿನಿ ಗಣೇಶ್, ಉದಯಶಂಕರ್, ಬಿ.ಸಿ. ವೆಂಕಟೇಶ್, ಸಂಜೀವ, ಶುಭಕರ್, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯ ನಿರೀಕ್ಷಕ ಉದಯಕುಮಾರ್ ಸೇರಿದಂತೆ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.