ಡಿಕೆಶಿ ಪದಗ್ರಹಣ ಮತ್ತೆ ಮುಂದೂಡಿಕೆ

02/06/2020

ಬೆಂಗಳೂರು ಜೂ.1 : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ.
ಕಳೆದ ಭಾನುವಾರ ಲಾಕ್‍ಡೌನ್ ಕಪ್ರ್ಯೂನಿಂದಾಗಿ ಮುಂದೂಡಿಕೆಯಾಗಿದ್ದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಈಗ ಜೂನ್ 7ಕ್ಕೆ ಮುಂದೂಡಿಕೆಯಾಗಿದೆ. ಇದೀಗ ಲಾಕ್ ಡೌನ್ 5.0 ನಿಂದಾಗಿ ರಾಜಕೀಯ ಕಾರ್ಯಕ್ರಮಗಳನ್ನು ನಡೆಸದಂತೆ ಕೇಂದ್ರ ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಮಾಣವಚನ ಮತ್ತೆ ಮುಂದೂಡಿಕೆಯಾಗಿದೆ.
ಕೇಂದ್ರ, ರಾಜ್ಯದ ಮಾರ್ಗಸೂಚಿ ಮೇಲೆ ಕಾರ್ಯಕ್ರಮ ಮುಂದೂಡಿಕೆಯಾಗಿದ್ದು, ಇದಕ್ಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಗೈಡ್ ಲೈನ್ ಪ್ರಕಾರ ರಾಜಕೀಯ ಕಾರ್ಯಕ್ರಮ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಗೌರವ ಕೊಡುತ್ತೇವೆ. ಆದರೂ ಕಾರ್ಯಕ್ರಮಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು,150 ಜನ ಸೇರಲು ಸರ್ಕಾರಕ್ಕೆ ಅನುಮತಿ ಕೇಳಿದ್ದೆವು.