ಚಿತ್ರನಟಿ ಆತ್ಮಹತ್ಯೆಗೆ ಶರಣು

02/06/2020

ಬೆಂಗಳೂರು ಜೂ.1 : ನಗರದ ತಾವರೆಕೆರೆಯಲ್ಲಿ ಕನ್ನಡ ಚಲನಚಿತ್ರ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.
ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸುದ್ದಗುಂಟೆ ಪಾಳ್ಯದ ಪೊಲೀಸರು ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ವಿಷ ಸೇವಿಸಿದ್ದ ಚಂದನಾರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತರಾಗಿದ್ದಾರೆ.
ಕನ್ನಡ ಕಿರುತೆರೆ, ಜಾಹೀರಾತು, ಚಲನಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸುತ್ತಿದ್ದರು. ವಿಷ ಸೇವನೆಯ ಸೆಲ್ಫಿ ವಿಡಿಯೋ ಮಾಡಿರುವ ಚಂದನಾ ಅವರು ತಮ್ಮ ಪ್ರಿಯಕರ ದಿನೇಶ್ ಎಂಬುವರ ಮೇಲೆ ಆರೋಪ ಮಾಡಿದ್ದಾರೆ. ದಿನೇಶ್ ಅವರು ಸದ್ಯ ನಾಪತ್ತೆಯಾಗಿದ್ದಾರೆ.
ಚಂದನಾ-ದಿನೇಶ್ ಇಬ್ಬರು ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಚಂದನಾ ವಾಸವಿದ್ದ ಬೆಂಗಳೂರು ಮನೆಗೆ ದಿನೇಶ್ ಆಗಾಗ ಬರುತ್ತಿದ್ದ. ಮದುವೆ ಪ್ರಸ್ತಾಪ ಬಂದಾಗ ಮಾತ್ರ ದಿನೇಶ್ ಮದುವೆಗೆ ಒಲ್ಲೆ ಎನ್ನುತ್ತಿದ್ದ ಎಂದು ಆರೋಪಿಸಲಾಗಿದೆ.