ಕೊಡಗಿನ ಬೆಳೆಗಾರರಿಗೆ ಪ್ಯಾಕೇಜ್ ನಿಂದ ಲಾಭವಾಗಿಲ್ಲ : ಪ್ರಾಂತ ರೈತ ಸಂಘ ಟೀಕೆ

02/06/2020

ಮಡಿಕೇರಿ ಜೂ.2 : ಕೊರೊನಾ ಸಾಂಕ್ರಾಮಿಕ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ 20 ಸಾವಿರ ಲಕ್ಷ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‍ನಿಂದ ಕೊಡಗಿನ ಬೆಳೆಗಾರರಿಗೆ ಹೆಚ್ಚಿನ ಪ್ರಯೋಜನವಾಗಿಲ್ಲವೆಂದು ಆರೋಪಿಸಿರುವ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕ, ಜಿಲ್ಲೆಯ ಬೆಳೆಗಾರರ ಸಂಕಷ್ಟಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿದೆ.