ಹೆಚ್‍ಡಿಕೆ ಹಾಗೂ ಖಾದರ್ ಅವರನ್ನು ಆಹ್ವಾನಿಸಲು ಒತ್ತಾಯ

02/06/2020

ಮಡಿಕೇರಿ ಜೂ.2 : 2018ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಮಹತ್ತರ ಪಾತ್ರ ವಹಿಸಿದ ಅಂದಿನ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ವಸತಿ ಸಚಿವ ಯು.ಟಿ.ಖಾದರ್ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಾಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಒತ್ತಾಯಿಸಿದ್ದಾರೆ.