ಜೆಡಿಎಸ್ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಬಲ್ಲಚಂಡ ಗೌತಮ್ ಆಯ್ಕೆ

02/06/2020

ಮಡಿಕೇರಿ ಜೂ.2 : ಕೊಡಗು ಜಿಲ್ಲಾ ಜಾತ್ಯಾತೀತ ಜನತಾ ದಳದ ಮಡಿಕೇರಿ ತಾಲ್ಲೂಕು ಅಧ್ಯಕ್ಷರನ್ನಾಗಿ ಮೂರ್ನಾಡು ಗ್ರಾಮದ ಬಲ್ಲಚಂಡ ಗೌತಮ್ ಅವರನ್ನು ನೇಮಿಸಿರುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.
ಮುಂಬರುವ ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಮತ್ತಿತರ ಚುನಾವಣೆಗಳಲ್ಲಿ ಪಕ್ಷಕ್ಕೆ ಜಯ ತಂದುಕೊಡಲು ಶ್ರಮಿಸುವಂತೆ ಸೂಚಿಸಿದ್ದಾರೆ.