ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯಪ್ಪ ಆಯ್ಕೆ

02/06/2020

ಪೊನ್ನಂಪೇಟೆ, ಜೂ.02: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ಸಿನ ಅಧೀನದ ಹುದಿಕೇರಿ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಜ್ಜಿಕುಟೀರ ಎಸ್. ಕಾರ್ಯಪ್ಪ (ನರೇನ್) ಅವರು ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ಹುದಿಕೇರಿ ವಲಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಇವರನ್ನು ಅವಿರೋಧವಾಗಿ ಆಯ್ಕೆ ಗೊಳಿಸಲಾಗಿದೆ.

ಗೋಣಿಕೊಪ್ಪಲಿನಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ವಲಯ ಅಧ್ಯಕ್ಷರ ಸಭೆಯಲ್ಲಿ ಕಾರ್ಯಪ್ಪ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು.