ಜಿಲ್ಲೆಗೆ ಎನ್‍ಡಿಆರ್‍ಎಫ್ ತಂಡ ಆಗಮನ

ಮಡಿಕೇರಿ ಜೂ.02 : ಕಳೆದ ಎರಡು ವರ್ಷಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಉಂಟಾದ ಪರಿಣಾಮವಾಗಿ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎನ್‍ಡಿಆರ್‍ಎಫ್ ತಂಡವನ್ನು ಕರೆಸಿದೆ. ಆ ನಿಟ್ಟಿನಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ 10 ನೇ ಬೆಟಾಲಿಯನ್ ತಂಡವು ಆಗಮಿಸಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅನನ್ಯ ವಾಸುದೇವ ಅವರು ನಗರದ ಪೊಲೀಸ್ ಮೈತ್ರಿ ಭವನದಲ್ಲಿ ಮಂಗಳವಾರ ಬರ ಮಾಡಿಕೊಂಡರು.
ಎನ್‍ಡಿಆರ್‍ಎಫ್ ತಂಡ ಕಮಾಂಡಿಂಗ್ ಅಧಿಕಾರಿ ಆರ್.ಕೆ.ಉಪಾಧ್ಯಾಯ ಅವರು ಒಳಗೊಂಡ 25 ಮಂದಿ ಆಗಮಿಸಿದ್ದಾರೆ. ಎನ್‍ಡಿಆರ್‍ಎಫ್ ತಂಡವು ಜಿಲ್ಲೆಯಲ್ಲಿ ಭೂಕುಸಿತ, ಪ್ರವಾಹ, ಕಟ್ಟಡ ಕುಸಿತ, ಪ್ರವಾಹ ಅಪಘಾತಗಳು ಮತ್ತಿತರ ಅವಘಡಗಳು ಸಂಭವಿಸಿದ್ದಲ್ಲಿ ತಕ್ಷಣವೇ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಅನನ್ಯ ವಾಸುದೇವ ಅವರು ತಿಳಿಸಿದ್ದಾರೆ.
ಮಳೆಗಾಲ ಮುಗಿಯುವ ತನಕ ಎನ್‍ಡಿಆರ್‍ಎಫ್ ತಂಡವು ಜಿಲ್ಲೆಯಲ್ಲಿ ಇರಲಿದ್ದು, ಪ್ರವಾಹ, ಭೂಕುಸಿತ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ಚಟುವಟಿಕೆಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.