ಕೊಡಗು ಜಿಲ್ಲೆಯ ಮಳೆ ವಿವರ

02/06/2020

ಮಡಿಕೇರಿ ಜೂ.02 : ಜಿಲ್ಲೆಯಲ್ಲಿ ಈ ಭಾರಿ ಸಕಾಲದಲ್ಲಿ ಮುಂಗಾರು ಆರಂಭಗೊಂಡಿದೆ. ಸಾಮಾನ್ಯವಾಗಿ ನೈಋತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ಆರಂಭವಾಗುತ್ತಿದ್ದ ಮುಂಗಾರು ಈ ಬಾರಿ ಜೂನ್, 01 ರಿಂದಲೇ ಆರಂಭವಾಗಿದೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 6.63 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.7 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.2 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1 ಮಿ.ಮೀ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.4, ನಾಪೋಕ್ಲು 13.4, ಸಂಪಾಜೆ 11, ಭಾಗಮಂಡಲ 33, ವಿರಾಜಪೇಟೆ ಕಸಬಾ 5.6, ಪೊನ್ನಂಪೇಟೆ 3.6, ಹುದಿಕೇರಿ 4, ಬಾಳೆಲೆ 6 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ಕಸಬಾ 2, ಸುಂಟಿಕೊಪ್ಪ 4 ಮಿ.ಮೀ.ಮಳೆಯಾಗಿದೆ.