ಪಿಎಸ್‍ಐ ಹುದ್ದೆಯ ಅರ್ಜಿ ಆಹ್ವಾನಕ್ಕೆ ತಾತ್ಕಾಲಿಕ ತಡೆ

02/06/2020

ಮಡಿಕೇರಿ ಜೂ.02 : ಪ್ರಸಕ್ತ (2020-21) ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೋಲೀಸ್ ಸಬ್-ಇನ್ಸ್‍ಪೆಕ್ಟರ್ ಸಿವಿಲ್ -431 ಮತ್ತು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಸಿವಿಲ್ ಕಲ್ಯಾಣ ಕರ್ನಾಟಕ–125 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಜೂನ್, 01 ರಿಂದ ಜೂನ್, 30 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಆದರೆ ಸರ್ಕಾರದ ಆದೇಶದ ಪ್ರಕಾರ ಮೇ, 30 ರ ಸೂಚನೆಯಂತೆ ಆಡಳಿತಾತ್ಮಕ ಕಾರಣಗಳಿಂದಾಗಿ ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ತಿಳಿಸಿದ್ದಾರೆ.