ನಿವೃತ್ತ ಎ.ಎಸ್.ಐ. ಚನ್ನರಾಜು ಗೆ ಬೀಳ್ಕೂಡುಗೆ

03/06/2020

ಸೋಮವಾರಪೇಟೆ ಜೂ. 3 : ಪೊಲೀಸ್ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಎ.ಎಸ್.ಐ. ಚನ್ನರಾಜು ಅವರನ್ನು ಸ್ಥಳೀಯ ಪೊಲೀಸ್ ಠಾಣಾ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ. ಶೈಲೇಂದ್ರ, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಸೇರಿದಂತೆ ಸಿಬ್ಬಂದಿಗಳು ಸನ್ಮಾನಿಸಿ, ಬೀಳ್ಕೊಟ್ಟರು.