ಜಿಲ್ಲಾಸ್ಪತ್ರೆಯಲ್ಲಿ ಅಲ್ಟ್ರಸೌಂಡ್ ಸ್ಕ್ಯಾನಿಂಗ್ ಸೇವೆ ಆರಂಭ

June 11, 2020

ಮಡಿಕೇರಿ ಜೂ. 11 : ಇತ್ತೀಚೆಗೆ ಪತ್ರಿಕೆಯೊಂದರಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಜಿಲ್ಲಾ ಆಸ್ಪತ್ರೆಯಲ್ಲಿ) ರೇಡಿಯೋಲಜಿ ವಿಭಾಗದಲ್ಲಿ ಅಲ್ಟ್ರಸೌಂಡ್ ಸ್ಕ್ಯಾನಿಂಗ್ ಯಂತ್ರವಿಲ್ಲದೆ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿರುವ ಬಗ್ಗೆ ವರದಿಯಾಗಿತ್ತು.

ಈ ಸಂಬಂಧ ಪರಿಶೀಲಿಸಲಾಗಿ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಅಲ್ಟ್ರಸೌಂಡ್ ಸ್ಕ್ಯಾನಿಂಗ್ ಯಂತ್ರವಿದ್ದು, ರೇಡಿಯೋಲಜಿ ವಿಭಾಗದಲ್ಲಿ ವೈದ್ಯರು ಇಲ್ಲದ ಕಾರಣ ಉಪಯೋಗವಾಗದೆ ಇದ್ದ ಹೊಸ ಅಲ್ಟ್ರಸೌಂಡ್ ಸ್ಕ್ಯಾನಿಂಗ್ ಯಂತ್ರವನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈಗ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದ ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಟ್ರಸೌಂಡ್ ಸ್ಕ್ಯಾನಿಂಗ್ ಸೌಲಭ್ಯವಿದ್ದು, ಇಂದಿನಿಂದ ಸಾರ್ವಜನಿಕರಿಗೆ ಸೇವೆ ಆರಂಭಿಸಲಾಗಿದೆ.

ಅಲ್ಲದೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ರೇಡಿಯೋಲಜಿ, ಕ್ಷಯ ರೋಗ, ದಂತ ಚಿಕಿತ್ಸೆ, ಅರವಳಿಕೆ ಶಾಸ್ತ್ರ, ಶಸ್ತ್ರ ಚಿಕಿತ್ಸೆ, ಸ್ತ್ರೀ ಮತ್ತು ಪ್ರಸೂತಿ ರೋಗ, ರೋಗ ಲಕ್ಷಣ ಶಾಸ್ತ್ರ ವಿಭಾಗಗಳಿಗೆ ಬೋಧಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಈ ಎಲ್ಲಾ ವೈದ್ಯರೂ ಸಹ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.

error: Content is protected !!