ಕೊಡಗಿನಲ್ಲಿ ಗ್ರಂಥಾಲಯಗಳನ್ನು ಆರಂಭಿಸಲು ಕೆ.ಎಂ.ವೆಂಕಟೇಶ್ ಒತ್ತಾಯ

11/06/2020

ಮಡಿಕೇರಿ ಜೂ. 11 : ಕೊರೋನಾ ಲಾಕ್‍ಡೌನ್ ನಿಂದ ಮುಚ್ಚಲ್ಪಟ್ಟಿರುವ ಜಿಲ್ಲೆಯ ಎಲ್ಲಾ ಗ್ರಂಥಾಲಯಗಳನ್ನು ಓದುಗರ ಅನುಕೂಲಕ್ಕಾಗಿ ತೆರೆಯಬೇಕೆಂದು ನಗರಸಭಾ ಮಾಜಿ ಸದಸ್ಯ ಕೆ.ಎಂ.ವೆಂಕಟೇಶ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಡಿಕೇರಿ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇಲ್ಲಿ ಓದುಗರಿಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಗ್ರಂಥಾಲಯಗಳನ್ನು ತೆರೆಯಬೇಕೆಂದು ತಿಳಿಸಿದ್ದಾರೆ.
ಜಿಲ್ಲೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಹಿರಿಯರು ತಮ್ಮ ಸಮಯವನ್ನು ಗ್ರಂಥಾಲಗಳಲ್ಲಿ ಕಳೆಯಲು ಅವಕಾಶ ಕಲ್ಪಿಸಬೇಕೆಂದು ಹೇಳಿದ್ದಾರೆ.