Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:34 PM Sunday 17-October 2021

ಗೋಮಾಳ ಸಂರಕ್ಷಣೆಗೆ ಗೋಮಾಳ ಹಿತರಕ್ಷಣಾ ಸಮಿತಿ ಒತ್ತಾಯ

12/06/2020

ಮಡಿಕೇರಿ ಜೂ. 12 : ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಗೋಮಾಳದ ಜಮೀನನ್ನು ಉಳಿಸಿಕೊಳ್ಳಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳದೆ ಜಿಲ್ಲಾಡಳಿತ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತಲೇ ಬರುತ್ತಿದೆ ಎಂದು ಕೊಡಗು ಜಿಲ್ಲಾ ಗೋಮಾಳ ಹಿತರಕ್ಷಣಾ ಸಮಿತಿಯ ಸಂಚಾಲಕ ಮಾಚೀಮಾಡ ರವೀಂದ್ರ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 1960ರಲ್ಲಿ ಆರ್ಜಿ ಗ್ರಾಮದ ಸ.ನಂ 315/1ರಲ್ಲಿ 89.06 ಎಕರೆ ಜಮೀನನ್ನು ಗೋಮಾಳವಾಗಿ ಮೀಸಲಿರಿಸಿ ಆಗಿನ ಜಿಲ್ಲಾಡಳಿತ ಆದೇಶ ನೀಡಿತ್ತು. ಆದರೆ ನಂತರ ಬಂದ ಅಧಿಕಾರಿಗಳು ಗೋಮಾಳದ ಜಾಗವನ್ನು ಸಂರಕ್ಷಿಸಿಕೊಳ್ಳುವಲ್ಲಿ ವಿಫಲರಾದರು ಎಂದು ಟೀಕಿಸಿದರು.
ಗೋಮಾಳದ ಜಮೀನು ನಿಯಮಕ್ಕೆ ವಿರುದ್ಧವಾಗಿ ಮೂರನೇ ವ್ಯಕ್ತಿಗಳ ಪಾಲಾಗುತ್ತಿದ್ದುದ್ದನ್ನು ಮನಗಂಡು ಕಳೆದ ಅನೇಕ ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಾ ಬರಲಾಗಿದೆ. ರಾಜ್ಯ ಉಚ್ಚ ನ್ಯಾಯಾಲಯವು ಗೋಮಾಳದ ಜಾಗವನ್ನು ಯಾರಿಗೂ ಮಂಜೂರು ಮಾಡದೆ ಸಂರಕ್ಷಿಸಬೇಕೆಂದು ತೀರ್ಪು ನೀಡಿ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಆದರೆ ಇದರ ನಡುವೆಯೇ ಮುಸ್ಲಿಂ ಸಮುದಾಯದ ಸ್ಮಶಾನಕ್ಕೆ 2 ಎಕರೆ ಮತ್ತು ಇತರ ಉದ್ದೇಶಗಳಿಗೆ ಗೋಮಾಳದ ಜಮೀನು ಮಂಜೂರು ಮಾಡುವ ಮೂಲಕ ಜಿಲ್ಲಾಡಳಿತ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿದರು.
2016 ಜೂನ್ 17 ರಂದು ಉಳಿದ 47.47 ಎಕರೆ ಜಮೀನನ್ನು ಗೋಮಾಳಕ್ಕಾಗಿ ಉಳಿಸಿಕೊಳ್ಳಲು ನ್ಯಾಯಾಲಯ ಆದೇಶ ನೀಡಿದರೂ ಕೇವಲ 15.12 ಎಕರೆಯಷ್ಟನ್ನು ಮಾತ್ರ ಮೀಸಲಿಟ್ಟು ಉಳಿದ ಜಾಗವನ್ನು ಹೆಗ್ಗಳ ಗ್ರಾಮದಲ್ಲಿ ಗುರುತಿಸಲಾಯಿತು. ಇದು ಆರ್ಜಿ ಗ್ರಾಮದಿಂದ 10 ಕಿ.ಮೀ ದೂರದಲ್ಲಿದ್ದು, ಬಾಳುಗೋಡು ಮತ್ತು ಬೇಟೋಳಿ ಗ್ರಾಮಗಳಿಂದ ಹಸುಗಳನ್ನು ಕರೆದೊಯ್ದು ಮೇಯಿಸಲು ಸಾಧ್ಯವಿಲ್ಲವೆಂದು ರವೀಂದ್ರ ಹೇಳಿದರು.
ಆದ್ದರಿಂದ ಜಿಲ್ಲಾಡಳಿತ ಈ ಹಿಂದೆ ಇದ್ದ ಪ್ರದೇಶದಲ್ಲೇ 89.06 ಎಕರೆ ಜಮೀನನ್ನು ಸಂಪೂರ್ಣವಾಗಿ ಗೋಮಾಳಕ್ಕೆಂದು ಮೀಸಲಿಟ್ಟು ಸಂರಕ್ಷಿಸಬೇಕೆಂದು ಒತ್ತಾಯಿಸಿದರು. ಗೋಮಾಳದ ಜಾಗದಲ್ಲಿ ತಲೆ ಎತ್ತಿರುವ ಅನಧಿಕೃತ ಕಟ್ಟಡಗಳನ್ನು ತಕ್ಷಣ ತೆರವುಗೊಳಿಸಬೇಕು ಮತ್ತು ಗೋಮಾಳದ ಜಾಗಕ್ಕೆ ನಾಮಫಲಕ ಹಾಕಬೇಕು ಎಂದು ಒತ್ತಾಯಿಸಿದ ಅವರು ಜಿಲ್ಲಾಡಳಿತ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡರೆ ಹಿತರಕ್ಷಣಾ ಸಮಿತಿಯಿಂದ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಸಮಿತಿಯ ಸದಸ್ಯರುಗಳು ಹಾಗೂ ಹಿಂದೂ ಜಾಗರಣಾ ವೇದಿಕೆ ಮೈಸೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ವಿ.ಜೀವನ್, ಜಿಲ್ಲಾಧ್ಯಕ್ಷ ಮೇವಡ ಅಯ್ಯಣ್ಣ, ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವಿರಾಜಪೇಟೆ ಪ್ರಮುಖ್ ಬಿ.ವಿ.ಹೇಮಂತ್ ಮತ್ತು ಭಜರಂಗದಳದ ವಿರಾಜಪೇಟೆ ತಾಲ್ಲೂಕು ಸಂಚಾಲಕ ವಿವೇಕ್ ರೈ ಉಪಸ್ಥಿತರಿದ್ದರು.