ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

June 12, 2020

ಮಡಿಕೇರಿ ಜೂ.12 : ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಯೋಜನೆ ಅಡಿಯಲ್ಲಿ 2019ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://serviceonline.gov.in/karnataka ಮೂಲಕ ಆನ್‍ಲೈನ್‍ನಲ್ಲಿ ಜುಲೈ, 10 ರೊಳಗೆ ಅರ್ಜಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ ಅವರು ತಿಳಿಸಿದ್ದಾರೆ.