ಏಕಲವ್ಯ ಪ್ರಶಸ್ತಿ : ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನ

12/06/2020

ಮಡಿಕೇರಿ ಜೂ.12 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪುಟಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಅರ್ಹ ಕ್ರೀಡಾಪಟುಗಳು 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಇಲಾಖಾ ಅಧಿಕೃತ ಜಾಲತಾಣ http://serviceonline.gov.in/karnataka ಹಾಗೂ ಹಿರಿಯ ಕ್ರೀಡಾಪಟು, ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಇಲಾಖಾ ಅಧಿಕೃತ ಜಾಲತಾಣ http://serviceonline.gov.in/karnataka ಮೂಲಕ ಆನ್‍ಲೈನ್‍ನಲ್ಲಿ ಜುಲೈ, 10 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ ಅವರು ತಿಳಿಸಿದ್ದಾರೆ.