ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

12/06/2020

ಮಡಿಕೇರಿ ಜೂ.12 : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 6 ಅಂಗನವಾಡಿ ಕಾರ್ಯಕರ್ತೆ ಹಾಗೂ 7 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ತಾಲೂಕಿನ 1 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 12 ಅಂಗನವಾಡಿ ಸಹಾಯಕಿಯರು ಮತ್ತು ವಿರಾಜಪೇಟೆ ತಾಲೂಕಿನ 5 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 20 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು 18 ರಿಂದ 35ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿದ್ದಾರೆ.
ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ. ಆದರೆ ಸಹಾಯಕಿ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in  ನಲ್ಲಿ ಅರ್ಜಿಯನ್ನು ಭರ್ತಿ ಮಾಡ ಬಹುದಾಗಿರುತ್ತದೆ.
ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-08272-298379, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08272-228197, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08276-282281, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08274-249010 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಅವರು ತಿಳಿಸಿದ್ದಾರೆ.


ಸೋಮವಾರಪೇಟೆ : ಸೋಮವಾರಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರದ ಹೆಸರು ದೊಡ್ಡಳುವಾರ, ಹೊಸತೋಟ, ದಂಡಿನಪೇಟೆ-2, ನಿಡ್ತಕೊಪ್ಪಲು, ಹೆಬ್ಬಾಲೆ-1, ಶಿರಂಗಾಲ-3, ತಾಕೇರಿ-1, ಹರಗ, ಹಾಲೇರಿ, ನವಗ್ರಾಮ, ನಿಲುವಾಗಿಲು, ಕೆಂಚಮ್ಮನ ಬಾಣೆ ಮತ್ತು ಗುಡುಗಳಲೆ ಅಂಗನವಾಡಿ ಕೇಂದ್ರ.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ, 09 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ರ್ತಿಣರಾಗಿರಬೇಕು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ 4 ರಿಂದ 9 ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು, 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಇತರೆ ಯಾವುದೇ ರೂಪದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ದೂ.ಸಂ:08276-282281 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.