ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಮಯೂರಿ

13/06/2020

ಬೆಂಗಳೂರು : ಖ್ಯಾತ ನಟಿ ಮಯೂರಿ ಅವರು ಶುಕ್ರವಾರ (ಜೂ.12) ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಇರುವ ಶ್ರೀ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಾಹ ನೆರವೇರಿದೆ. ಗೆಳೆಯ ಅರುಣ್‌ ಜೊತೆ ಅವರು ಸಪ್ತಪದಿ ತುಳಿದಿದ್ದಾರೆ. ‘ಹೌದು, ನಾನು ಮದುವೆ ಆಗಿದ್ದೇನೆ. ನಮ್ಮ 10 ವರ್ಷದ ಗೆಳೆತನಕ್ಕೆ ಇಂದು ಅರ್ಥ ಸಿಕ್ಕಿದೆ. ಸದ್ಯದಲ್ಲೇ ನಾವು ಹೆಚ್ಚಿನ ವಿವರ ಹಂಚಿಕೊಳ್ಳುತ್ತೇವೆ’ ಎಂದು ಅಭಿಮಾನಿಗಳಿಗೆ ಶುಭ ಸಮಾಚಾರ ತಿಳಿಸಿದ್ದಾರೆ.