ಕೊರೋನಾ ಮುನ್ನೆಚ್ಚರಿಕೆ : ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ 36 ಮಂದಿ ದಾಖಲು

14/06/2020

ಮಡಿಕೇರಿ ಜೂ.14 : ಕೇವಲ ಮೂವರು ಕೊರೋನಾ ವೈರಸ್ ಸೋಂಕಿತರು ಪತ್ತೆಯಾದ ಕೊಡಗಿನಲ್ಲಿ ಸೋಂಕು ಹರಡದಂತೆ ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಇತರೆ ದೇಶ, ರಾಜ್ಯ, ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವವರನ್ನು ಸಂಪರ್ಕ ತಡೆಯಲ್ಲಿಡಲಾಗಿದೆ.
ಇತರೆ ದೇಶದ 17, ಇತರೆ ರಾಜ್ಯದ 642 ಮಂದಿಯನ್ನು ಸಂಪರ್ಕ ತಡೆಯಲ್ಲಿಡಲಾಗಿದೆ. ಇಲ್ಲಿಯವರೆಗೆ ಒಟ್ಟು 4164 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಮೂವರಲ್ಲಿ ಸೋಂಕು ಕಾಣಿಸಿಕೊಂಡು ಒಬ್ಬರು ಗುಣಮುಖರಾಗಿದ್ದಾರೆ.
4056 ಮಾದರಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, 105 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಪ್ರಸ್ತುತ ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ 36 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.