ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆ
15/06/2020

ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆ
ಬೆಂಗಳೂರು ಜೂ.14 : ಕರ್ನಾಟಕದಲ್ಲಿ ಇಂದು ಹೊಸದಾಗಿ 176 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 5 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
ಕರ್ನಾಟಕದಲ್ಲಿ ಇಂದು 176 ಪ್ರಕರಣ ಪತ್ತೆಯಾಗಿದೆ. ಇನ್ನು 5 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಪತ್ತೆಯಾಗಿರುವ 7000 ಪ್ರಕರಣಗಳ ಪೈಕಿ 3,955 ಮಂದಿ ಗುಣಮುಖರಾಗಿದ್ದಾರೆ. ಇನ್ನು 2,956 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
