ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ : ಶಾಸಕರು-ಸಚಿವರೊಂದಿಗೆ ಸಿಎಂ ಬಿಎಸ್​ವೈ ಮಹತ್ವದ ಸಭೆ

15/06/2020

ಬೆಂಗಳೂರು 15 : ಕೊರೋನಾ ವೈರಸ್ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರ ಸಕಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಂದ ಹಿಡಿದು, ಎಲ್ಲ ಮುಖಂಡರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದು, ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ಇಂದು ಸಹ ಸಿಎಂ ಬಿಎಸ್​ವೈ ಅವರು ಶಾಸಕರು ಹಾಗೂ ಸಚಿವರೊಂದಿಗೆ ಸಭೆಯನ್ನು ನಡೆಸಲಿದ್ದಾರೆ.

ರಾಜ್ಯದ ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿಗಳು ಎಲ್ಲಾ ಶಾಸಕರು, ಸಚಿವರೊಂದಿಗೆ ಮಹತ್ವದ ಸಭೆ ಕರೆದಿದ್ದಾರೆ.