ಸೋಮವಾರಪೇಟೆಯಲ್ಲಿ ಬಾಲಕಾರ್ಮಿಕ ನಿಷೇಧ ಕಾಯ್ದೆ ಜಾಗೃತಿ ಜಾಥ

15/06/2020

ಸೋಮವಾರಪೇಟೆ ಜೂ.15 : ಜಿಲ್ಲಾಡಳಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕೊಡಗು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲಕಾರ್ಮಿಕ ನಿಷೇಧ ಕಾಯ್ದೆಯ ಜಾಗೃತಿ ಜಾಥ ಪಟ್ಟಣದಲ್ಲಿ ಸೋಮವಾರ ನಡೆಯಿತು.
ಪಪಂ ಮುಖ್ಯಾಧಿಕಾರಿ ನಾಚಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಲ್ಯಾವಸ್ಥೆ ಹಾಗು ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರಂತೆ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಜ್ ಆಹ್ಮದ್ ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಖರ್, ಸೋಮವಾರಪೇಟೆ ಕಾರ್ಮಿಕ ನಿರೀಕ್ಷಕರಾದ ಕೆ.ಎನ್.ಲೀನಾ, ಶಿಕ್ಷಣ ಸಂಯೋಜಕರಾದ ರಾಧಕೃಷ್ಣ ಇದ್ದರು.