ಕಾಡಾನೆ ದಾಳಿಗೆ ವ್ಯಕ್ತಿ ಬಲಿ : ಕಕ್ಕಬ್ಬೆಯ ಯವಕಪಾಡಿ ಗ್ರಾಮದಲ್ಲಿ ಘಟನೆ

16/06/2020

ಮಡಿಕೇರಿ ಜೂ.16 : ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಕ್ಕಬ್ಬೆ ಬಳಿಯ ಯವಕಪಾಡಿ ಗ್ರಾಮದಲ್ಲಿ ನಡೆದಿದೆ.
ಕುಡಿಯರ ಚಿಣ್ಣಪ್ಪ(70) ಮೃತ ವ್ಯಕ್ತಿ. ರಾತ್ರಿ ವೇಳೆ ಆನೆಗೆ ಬಲಿಯಾಗಿರುವ ಶಂಕೆ ವ್ಯಕ್ತಪಡಿಸಿದ್ದು, ಇಂದು ಬೆಳಿಗ್ಗೆ ಮನೆಯ ಅನತಿ ದೂರದಲ್ಲಿ ಕರುಳು ಹೊರಬಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಪೂಮಲೆ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಚಿಣ್ಣಪ್ಪ ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.