ಡಿಕೆಶಿ ಮಗಳ ಮದುವೆ ನಿಶ್ಚಯ

16/06/2020

ಬೆಂಗಳೂರು ಜೂ.16 : ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ.
ಇಂದು ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್ ಅವರ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿತ್ತು. ಮೂರು ದಿನಗಳ ಹಿಂದೆಯಷ್ಟೇ ಎಸ್‍ಎಂಕೆ ನಿವಾಸಕ್ಕೆ ಡಿಕೆಶಿ ಕುಟುಂಬ ಹೋಗಿದ್ದರು. ಇಂದು ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮಥ್ರ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ನಿಶ್ಚಯವಾಗಿದೆ.