ಹೊರ ರಾಜ್ಯಗಳಿಂದ ಆಗಮಿಸುವವರಿಗೆ ನೂತನ ಮಾರ್ಗಸೂಚಿ

16/06/2020

ಮಡಿಕೇರಿ ಜೂ.16 : ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರ, ಹೊರ ರಾಜ್ಯಗಳಿಂದ ಆಗಮಿಸುವವರು ಅನುಸರಿಸಬೇಕಾದ ನೂತನ ನಿಯಮಾವಳಿಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆಯೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿಯಂತೆ ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಹಿಂತಿರುಗುವವರು 7 ದಿನಗಳ ಕಾಲ ಸಾಂಸ್ಥಿಕ ಮತ್ತು ತದನಂತರ 7 ದಿನಗಳ ಕಾಲ ಗೃಹ ಸಂಪರ್ಕ ತಡೆಯಲ್ಲಿರಬೇಕಾಗುತ್ತದೆ.
ದೆಹಲಿ, ತಮಿಳುನಾಡು ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಹಿಂತಿರುಗುವವರು 3 ದಿನಗಳ ಕಾಲ ಸಾಂಸ್ಥಿಕ ಮತ್ತು ತದನಂತರ 11 ದಿನಗಳ ಕಾಲ ಗೃಹ ಸಂಪರ್ಕ ತಡೆಯಲ್ಲಿರಬೇಕಾಗುತ್ತದೆ.
ಈ ಮೇಲಿನ ಮೂರು ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಹಿಂತಿರುಗುವವರು 14 ದಿನಗಳ ಕಾಲ ಗೃಹ ಸಂಪರ್ಕ ತಡೆಯಲ್ಲಿರಬೇಕಾಗುತ್ತದೆ. ಗೃಹ ಸಂಪರ್ಕ ತಡೆಯ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅವರನ್ನು ಕಡ್ಡಾಯವಾಗಿ ಸಾಂಸ್ಥಿಕ ಸಂಪರ್ಕ ತಡೆ ಕೇಂದ್ರಗಳಿಗೆ ಕಳುಹಿಸಲಾಗುವುದೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.