ಜೂ. 20 ರಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರ ಜಿಲ್ಲಾ ಪ್ರವಾಸ

17/06/2020

ಮಡಿಕೇರಿ ಜೂ.17 : ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರು ಹಾಗೂ ಮಲೆನಾಡಿನ ಭೂಕುಸಿತ ಅಧ್ಯಯನ ಸಮಿತಿಯ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಅವರು ಜೂನ್, 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಅಧ್ಯಕ್ಷರು ಜೂನ್, 20 ರಂದು ಬೆಳಗ್ಗೆ 8.30 ಗಂಟೆಗೆ ಕೊಡಗು ಜಿಲ್ಲೆಯ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.