ಕೊಡಗು ಜಿಲ್ಲಾ ಜೆಡಿಎಸ್ ನಿಂದ ಖಾಸಗಿ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ದಿನಸಿ ಕಿಟ್ ವಿತರಣೆ

17/06/2020

ಮಡಿಕೇರಿ ಜೂ.17 : ಕೊರೋನಾ ಲಾಕ್‍ಡೌನ್‍ನಿಂದ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ಕೊಡಗು ಜಿಲ್ಲಾ ಜಾತ್ಯಾತೀತ ಜನತ ದಳ(ಜೆಡಿಎಸ್) ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.
ನಗರ ನೂತನ ಬಸ್ ನಿಲ್ದಾಣದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅವರ ನೇತೃತ್ವದಲ್ಲಿ ಸಮಾಜಿಕ ಅಂತರ ಕಾಯ್ದುಕೊಂಡು 150 ಫಲಾನುಭವಿಗಳಿಗೆ ಕಿಟ್ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಕೊರೋನಾ ಲಾಕ್‍ಡೌನ್‍ನಿಂದಾಗಿ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಂಡಿದ್ದು, ಬಸ್ ಚಾಲಕರು ಮತ್ತು ನಿರ್ವಾಹಕರು ಯಾವುದೇ ಆದಾಯವಿಲ್ಲದೆ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಕೊಡಗು ಜಿಲ್ಲಾ ಜೆಡಿಎಸ್ ಬಸ್ ಚಾಲಕರು ಮತ್ತು ನಿರ್ವಾಹಕರ ಸಮಸ್ಯೆಯನ್ನು ಮನಗಂಡು ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ಎಂ. ಶರೀಫ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಕ್‍ಖಾನ್, ಮಡಿಕೇರಿ ತಾಲೂಕು ಅಧ್ಯಕ್ಷ ಗೌತಮ್, ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ಜಾಸಿರ್, ಜಿಲ್ಲಾ ಉಪಾಧ್ಯಕ್ಷ ಯುಸೂಫ್, ರಾಜ್ಯ ಸಂಘನಾ ಕಾರ್ಯದರ್ಶಿ ಮನ್ಸೂರ್ ಆಲಿ, ನಗರ ಜೆಡಿಎಸ್ ಅಲ್ಪಸಂಖ್ಯಾತರ ಅಧ್ಯಕ್ಷ ಕಲೀಲ್ ಭಾಷ, ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ರವಿ ಕಿರಣ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಗಣೇಶ್, ಬೊಳ್ಯಂಡ ಗಣೇಶ್, ಎಸ್.ಸಿ. ಘಟಕದ ಅಧ್ಯಕ್ಷ ರವಿಕುಮಾರ್ ಹಾಗೂ ಪ್ರಮುಖರಾದ ಅಜೀತ್ ಕೊಟ್ಟಕೇರಿಯನ, ಸೈಫ್ ಆಲಿ, ಸುಕೇಶ್, ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿ ಲೀಲಾಶೇಷಮ್ಮ, ಮಡಿಕೇರಿ ನಗರಾಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ ಹಾಗೂ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.